ಕಿನ್ನಿಗೋಳಿ: ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.
ನಡುಗೋಡು ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಹಳೇವಿದ್ಯಾರ್ಥಿ ಸಂಘ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಅವರನ್ನು ಸನ್ಮಾನಿಸಲಾಯಿತು. ಹಳೇವಿದ್ಯಾರ್ಥಿ ಸಂದ ವತಿಯಿಂದ ಸಹಾಯಹಸ್ತ ನಡುಗೋಡು ಹೆಸರಿನಲ್ಲಿ ಯೋಜನೆ ಪ್ರಾರಂಭಿಸಿದ್ದು, ಫಲಾನುಭವಿಗಳಿಗೆ ಅರ್ಥಿಕ ನೆರವು ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಯುಗಪುರುಷದ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಭಿಲಾಷ್ ಶೆಟ್ಟಿ ಕಟೀಲು, ಹಳೇವಿದ್ಯಾರ್ಥಿ ಸಂದ ಅಧ್ಯಕ್ಷ ದೇವಿಪ್ರಸಾದ್ ರೈ, ಕಾರ್ಯದರ್ಶಿ ಮಿಥುನ್ ಆಚಾರ್ಯ, ಪ್ರೌಢಶಾಲಾ ಮುಖ್ಯಶಿಕ್ಷಕಿ ಶಾಂತಿ ಭಟ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಐರಿನ್ ಡಿಸೋಜ, ಪ್ರೌಢಶಾಲಾ ಶಿಕ್ಷಕ ರಕ್ಷಕ ಸಂದ ಅಧ್ಯಕ್ಷೆ ಮಲ್ಲಿಕಾ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂದ ಅಧ್ಯಕ್ಷೆ ವಿದ್ಯಾ ಶೆಟ್ಟಿ ಮತ್ತಿತರರಿದ್ದರು.
ಸುಧೀರ್ ಶೆಟ್ಟಿ ವರದಿ ವಾಚಿಸಿದರು. ಶಿಕ್ಷಕ ಪರಮಪ್ರಸಾದ್, ಶಿಕ್ಷಕಿ ಪಯಸ್ವಿನಿ, ಶಿಕ್ಷಕಿ ಮಾಯ ಬಹುಮಾನಿತರ ಪಟ್ಟಿ ವಾಚಿಸಿದರು. ದಾನಿಗಳಾದ ಹರಿಶ್ಚಂದ್ರ ಆಚಾರ್ಯ ಬಹುಮಾನ ವಿತರಿಸಿದರು. ಹಳೆವಿದ್ಯಾರ್ಥಿ ಸಂಘ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಮತ್ತು ಹೇಮಂತ್ ಶೆಟ್ಟಿ ನಿರೂಪಿಸಿದರು. ತಿಲಕ್ ರಾಜ್ ಶೆಟ್ಟಿ ವಂದಿಸಿದರು.