ಗಂಗೊಳ್ಳಿ: ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ 2023-24ನೇ ಸಾಲಿನ ಮಹಾಸಭೆ ಸೋಮವಾರ ನಡೆಯಿತು.
ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿ, ವರದಿ ವರ್ಷದಲ್ಲಿ 5503 ಸದಸ್ಯರೊಂದಿಗೆ 1.54 ಕೋಟಿ ರೂ. ಪಾಲು ಬಂಡವಾಳ ಹೊಂದಿದೆ. ವರ್ಷ ಅಂತ್ಯಕ್ಕೆ 42.24 ಕೋಟಿಗೂ ಮಿಕ್ಕಿ ಠೇವಣಿ ಮತ್ತು 3.76 ಕೋಟಿ ರೂ. ನಿಧಿಗಳನ್ನು ಹೊಂದಿದೆ. ಹೊರಬಾಕಿ ಸಾಲ 50 ಕೋಟಿ ರೂ. ಇದೆ. 15.42 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲಾಗಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 15.66 ಕೋಟಿ ರೂ. ಆರ್ಥಿಕ ಸಹಾಯ ಪಡೆಯಲಾಗಿದೆ. ವರ್ಷಾಂತ್ಯಕ್ಕೆ ಸಂಘ 80.59 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.11 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದರು.
ನಿರ್ದೇಶಕ, ಆಲೂರು ಗ್ರಾಪಂ ಅಧ್ಯಕ್ಷ ರಾಜೇಶ ದೇವಾಡಿಗ ಸಂಘದ ಪ್ರಗತಿ ಹಾಗೂ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಘದ ವ್ಯಾಪ್ತಿಯ ಶಾಲೆಗಳಲ್ಲಿ 5ರಿಂದ 10ನೇ ತರಗತಿಗಳ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಉಪಾಧ್ಯಕ್ಷ ಎನ್.ಸಂತೋಷ ಕುಮಾರ್ ಶೆಟ್ಟಿ, ನಿರ್ದೇಶಕರಾದ ರತ್ನಾಕರ ಆಚಾರ್ಯ ಎಂ., ಎಚ್.ಶಂಕರ ಶೆಟ್ಟಿ, ಎಂ.ಚಂದ್ರಶೇಖರ ಶೆಟ್ಟಿ, ಗಂಗಾಧರ ಆಚಾರ್ಯ, ಸುಬ್ಬ ಪೂಜಾರಿ, ಅಮರನಾಥ ಶೆಟ್ಟಿ, ಸುರೇಂದ್ರ, ಹರೀಶ್, ಲಲಿತಾ ಕುಲಾಲ್, ಅಕ್ಕಯ್ಯ ಯಾನೆ ಆಶಾ ಉಪಸ್ಥಿತರಿದ್ದರು. ಮ್ಯಾನೇಜರ್ ಎಂ.ಸಂಜೀವ ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಬಜೆಟ್ ಮಂಡಿಸಿದರು. ಸಂಘದ ಸಿಬ್ಬಂದಿ ಗಣೇಶ ಕಾರ್ಯಕ್ರಮ ನಿರ್ವಹಿಸಿದರು.