ಜಿಲ್ಲೆ

ರೈತರ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ-ಶಾಸಕ ಮಂಜು

 ಆಲೂರು : ಬಗರ್‌ಹುಕುಂಗೆ ಸಂಬಂಧಿಸಿದ , ದಾಖಲೆ ಪರಿಶೀಲಿಲಿಸಿ ಅರ್ಜಿ ಸಲ್ಲಿಸಿರುವ ಯಾವ ರೈತರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಹಮ್ಮಿಕೊಂಡಿದ್ದ ಬಗರ್ ಹುಕುಂ ಸಾಗುವಳಿ ಮಂಜೂರಾತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಿಯಮಾನುಸಾರ ಅರ್ಜಿ ಸಲ್ಲಿಸಿ ಅನುಭವದಾರರಿಗೆ ನ್ಯಾಯ ಒದಗಿಸಿ. ರೈತರ ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅವರು ತಹಸೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.

ತಹಸೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿ, ಎರಡು ವರ್ಷಗಳ ನಂತರ ಬಗರ್ ಹುಕುಂ ಸಮಿತಿ ಸಭೆ ನಡೆದಿದೆ. 26 ಫಲಾನುಭವಿಗಳ ಪೈಕಿ, ಎರಡು ಅರ್ಜಿಗಳನ್ನು ಅನುಮೋದಿಸಲಾಗಿದೆ. ಉಳಿದ 24 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು. ಉಪ ತಹಸೀಲ್ದಾರ್‌ಎಂ.ಎ.ಅಂಕೆಗೌಡ, ಭೂಮಿ ಸಂಯೋಜಕ ಪ್ರದೀಪ ಸೇರಿದಂತೆ ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಹಾಗು ಸಿಬ್ಬಂದಿ ಹಾಜರಿದ್ದರು.