ಜಿಲ್ಲೆ

ಕೆಂಪೇಗೌಡರ ಜಾತ್ಯತೀತ ಮನೋಭಾವ ಸ್ಮರಣೀಯ

ಎ. ಆರ್. ರಘುರಾಮ

ಆಲೂರು: ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಸ್ಮರಣೀಯ ಎಂದು ತಹಸೀಲ್ದಾರ್ ನಂದಕುಮಾರ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೆಂಪೇಗೌಡರು ದೂರದೃಷ್ಟಿಯಿಂದ ಅಂದು ಬೆಂಗಳೂರನ್ನು ಕಟ್ಟಿದರು. ಎಲ್ಲ ಸಮುದಾಯದವರೂ ಇಂದು ಸಹಬಾಳ್ವೆಯಿಂದ ಜೀವನ ನಡೆಸುವಂತಾಗಿದೆ ಎಂದರು.