ಜಿಲ್ಲೆ

ತಾಲೂಕುಮಟ್ಟದ ವಾಲಿಬಾಲ್‌ನಲ್ಲಿ ಆಳ್ವಾಸ್‌ಗೆ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪಿಯು ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿ ಪಡೆಯಿತು.

ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿ ಪ್ರಶಸ್ತಿ ಪಡೆಯಿತು.