ಗಂಗೊಳ್ಳಿ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳ ಜೂ.7 ಹಾಗೂ 8ರಂದು ಮೂಡುಬಿದಿರೆ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು.
ಹೊರಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂ.6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳ ವಿವರ ಹಾಗೂ ನವೀಕೃತ ಮಾಹಿತಿಗಳನ್ನು www.alvaspragati.comನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಒಟ್ಟು 200ಕ್ಕೂ ಅಧಿಕ ಕಂಪನಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕುಂದಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಐಟಿಐ, ಡಿಪ್ಲೊಮಾ ಹಿನ್ನೆಲೆಯವರಿಗೆ ಆಳ್ವಾಸ್‌ನಿಂದ ಬಸ್ ವ್ಯವಸ್ಥೆ ಒದಗಿಸಲಾಗುವುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ- 9008907716, ಕಂಪನಿಗಳ ನೋಂದಣಿ ಹಾಗೂ ಇತರ ಮಾಹಿತಿಗೆ- 8971250414 ಸಂಪರ್ಕಿಸಬಹುದು ಎಂದರು.
ಆಳ್ವಾಸ್ ಪ್ರಗತಿ 2024ರ ಐಟಿಇಎಸ್ ಸೆಕ್ಟರ್ ಮುಖ್ಯಸ್ಥ ಡಾ.ಗುರುಪ್ರಸಾದ್ ಪೈ ಬಿ. ಸುದ್ದಿಗೋಷ್ಠಿಯಲ್ಲಿದ್ದರು.