ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ಆಯೋಜಿಸಲಾದ ಕರ್ನಾಟಕ ರಾಜ್ಯ ಅಂತರ್‌ಜಿಲ್ಲಾ ಕಿರಿಯರು ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್‌ನಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಸೇರಿ ಒಟ್ಟು 42 ಪದಕಗಳು ದೊರೆತಿದ್ದು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೂ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಳ್ಳುವಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ ಮಹತ್ವದ ಪಾತ್ರವಹಿಸಿದೆ.
ನೂತನ ಕೂಟ ದಾಖಲೆ: 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ನಾಗಿಣಿ 1000 ಮೀ, 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನ್ಯಾನ್‌ದೇವ್ 80 ಮೀ. ಹರ್ಡಲ್ಸ್ ಹಾಗೂ 23 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆ ಮಾಡಿದ್ದಾರೆ.
ವೈಯಕ್ತಿಕ ಪ್ರಶಸ್ತಿ: 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆದರ್ಶ್ ಕ್ರೀಡಾಕೂಟದಲ್ಲಿ ಕೊಡಮಾಡುವ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸಾಧಕ ಕ್ರೀಡಾಪಟುಗಳನ್ನು ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.