ಜಿಲ್ಲೆ

ಸಂವಿಧಾನ ರಕ್ಷಣೆಗೆ ಬೇಕಿದೆ ಹೋರಾಟ

reporterctd

ದಾವಣಗೆರೆ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.
 ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಗೃಹ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ‌್ಯಕ್ರಮದಲ್ಲಿ ಮಾತನಾಡಿದರು.
 ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು. ಅಂಬೇಡ್ಕರ್ ಚಿಂತನೆಗಳು ಆದರ್ಶವಾಗಲಿ ಎಂದರು.
 ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಎಸ್.ಮಲ್ಲಿಕಾರ್ಜುನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಎಲ್.ಎಚ್. ಸಾಗರ್, ಮೈನುದ್ದೀನ್, ಪ್ರೊ.ಸಿ.ಎಚ್.ಮುರುಗೇಂದ್ರಪ್ಪ, ರಂಗಸ್ವಾಮಿ, ತಿಪ್ಪೇಸ್ವಾಮಿ, ಶಾಮನೂರು ಕುಮಾರ್, ಟಿ.ರಮೇಶ್, ರಾಘವೇಂದ್ರ ಗೌಡ, ಆವರಗೆರೆ ಮಂಜು ಇದ್ದರು.