ಜಿಲ್ಲೆ

ಅಂಬೇಡ್ಕರ್ ಉತ್ಸವ ಮುಂದಕ್ಕೆ

Davangere - Desk - Mahesh Babu E

ಚಿತ್ರದುರ್ಗ: ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನಗರದ ತರಾಸು ರಂಗಮಂದಿರದಲ್ಲಿ ಆ.27ರಂದು ಏರ್ಪಡಿಸಿದ್ದ ಎಸ್ಸಿ,ಎಸ್ಟಿ ವಿದ್ಯಾರ್ಥಿ ಗಳ ಶೈಕ್ಷಣಿಕ ಸಮಾವೇಶ ‘ಅಂಬೇಡ್ಕರ್‌ಉತ್ಸವ’ ವನ್ನು ಮುಂದೂಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಸಮಾರಂಭವನ್ನು ಆ.30ರಂದು ಮೈಸೂರಿನಲ್ಲಿ ಆಯೋಜಿಸಲಾಗಿದ್ದು, ಇದರ ಉಸ್ತುವಾರಿಯನ್ನು ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರಿಗೆ ವಹಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಕಾರ್ಯಾಲಯದ ಕೋರಿಕೆಯ ಹಿನ್ನೆಲೆಯಲ್ಲಿ ಸಮಾವೇಶವನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಲಾಗಿದ್ದು, ಅಂದು ಬೆಳಗ್ಗೆ 11ಕ್ಕೆ ತರಾಸು ರಂಗಮಂದಿರದಲ್ಲಿ ಸಮಾವೇಶ ನಡೆಯಲಿದೆ.

ರಾಜ್ಯದ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಚರ್ಚಿಸುವ ಈ ಸಮಾವೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.