ಜಿಲ್ಲೆ

ಅಂಬೇಡ್ಕರ್ ಪುತ್ಥಳಿ ಅನಾವರಣ ಇಂದು

ಎಂ.ರವಿ

ಸರಗೂರು: ತಾಲೂಕಿನ ಹಂಚೀಪುರ ಗ್ರಾಪಂ ವ್ಯಾಪ್ತಿಯ ಹಳಿಯೂರು ಗ್ರಾಮದಲ್ಲಿ ಜು. 9 ರಂದು ನೂತನವಾಗಿ ನಿರ್ಮಾಣಗೊಂಡಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಮತ್ತು ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 11 ಗಂಟೆ ಮೈಸೂರು ಗಾಂಧಿನಗರದ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಅಂತರಸಂತೆ ಸರನಾಥ ಬುದ್ಧ ವಿಹಾರದ ಗೌತಮಿ ಬಂತೇಜಿ ಅವರು ಪ್ರತಿಮೆ ಅನಾವರಣದ ವಿಧಿವಿಧಾನ ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಪ್ರತಿಮೆ ಅನಾವರಣ ಮಾಡುವರು.

ವೇದಿಕೆ ಕಾರ್ಯಕ್ರಮವನ್ನು ನೂತನ ಸಂಸದ ಸುನೀಲ್ ಬೋಸ್ ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆ ವಹಿಸಿದ್ದಾರೆ. ಶಾಸಕ ದರ್ಶನ್ ಧ್ರುವನಾರಾಯಣ ಅವರನ್ನು ಸನ್ಮಾನಿಸಲಾಗುವುದು. ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ. ಶಿವಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಗ್ರಾಮದ ಯಜಮಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.