ಜಿಲ್ಲೆ

ಅಂಬೇಡ್ಕರ ಓದು ನಾಳೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ವಿಶ್ವ ವಿದ್ಯಾಲಯದ ಸರ್​. ಸಿದ್ದಪ್ಪ ಕಂಬಳಿ ಕಾನೂನು ಕಾಲೇಜಿನ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಫೆ. 7ರಂದು ಕಾಲೇಜಿನ ಸಭಾಭವನದಲ್ಲಿ ಡಾ. ಬಿ.ಆರ್​.ಅಂಬೇಡ್ಕರ ಓದು ಕಾರ್ಯಕ್ರಮ ಆಯೋಜಿಸಲಾಗಿದೆ.

ಚಿಂತಕ ಶಂಕರ ಹಲಗತ್ತಿ ಕಾರ್ಯಕ್ರಮ ಉದ್ಘಾಟಿಸುವರು. ಸಾಹಿತಿ ಡಾ. ಸದಾಶಿವ ಮರ್ಜಿ ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಚಾರ್ಯೆ ಡಾ. ಮಂಜುಳಾ ಎಸ್​.ಆರ್​. ಅಧ್ಯಕ್ಷತೆ ವಹಿಸುವರು. ಯರಿನಾರಯಣಪುರದ ಶರೀಫ್ ದೊಡ್ಡಮನಿ ಮತ್ತು ತಂಡದಿಂದ ಜಾಗೃತಿ ಗೀತೆಗಳ ಗಾಯನ ನಡೆಯಲಿದೆ.

ಗಾಯನ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಕವನ ವಾಚನ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಕುಮಾರ ಬೆಕ್ಕೇರಿ ತಿಳಿಸಿದ್ದಾರೆ.