ಜಿಲ್ಲೆ

ದೇಶಪ್ರೇಮ ಬೆಳೆಸುವುದು ನಿಜವಾದ ಶಿಕ್ಷಣ - ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅನಿಸಿಕೆ

Mangaluru - Nishantha Narayana

ಪುತ್ತೂರು: ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪಾಲಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮ ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಕ್ಷಕ - ಶಿಕ್ಷಕ ಸಂಘ ಅಧ್ಯಕ್ಷ ಡಾ.ದೀಪಕ್ ರೈ ಮಾತನಾಡಿ, ಶಿಕ್ಷಣ ಎಂದರೆ ಕೇವಲ ಪ್ರಮಾಣಪತ್ರ ಪಡೆದುಕೊಳ್ಳುವುದಲ್ಲ. ಆತ್ಮದಿಂದ ಬೆಳವಣಿಗೆ ಆಗಬೇಕು. ಅಷ್ಟೇ ಅಲ್ಲದೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹೀಗೆ ಸರ್ವತೋಮುಖ ಬೆಳವಣಿಗೆಯೇ ನಿಜವಾದ ಶಿಕ್ಷಣ ಎಂದು ತಿಳಿಸಿದರು.

ನೂತನವಾಗಿ ಅಳವಡಿಸಲಾಗುವ ಶಾಲಾ ಆಪ್ ಕುರಿತು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ಮಾಹಿತಿ ನೀಡಿದರು. ಶೈಕ್ಷಣಿಕ ವರ್ಷದ ಕಾರ್ಯ ಚಟುವಟಿಕೆಗಳ ಕುರಿತು ಪ್ರಾಂಶುಪಾಲೆ ಮಾಲತಿ ಡಿ. ಭಟ್ ವಿವರಿಸಿದರು. ಉಪ ಪಾಲಕರು ನಿರ್ವಹಿಸಬಹುದಾದ ಕರ್ತವ್ಯಗಳ ಬಗ್ಗೆ ಪ್ರಾಂಶುಪಾಲೆ ಸುಜನಿ ಬೋರ್ಕರ್ ತಿಳಿಸಿದರು. ಶಿಕ್ಷಕಿಯರಾದ ಸುಷ್ಮಾ ಮಿಥುನ್ ಸ್ವಾಗತಿಸಿದರು. ಕುಸುಮಾ ವಂದಿಸಿದರು, ಪ್ರಿಯಾಶ್ರೀ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.