ಜಿಲ್ಲೆ

ಡಾ. ವೀಣಾ ಶಾಂತೇಶ್ವರ, ಪ್ರೊ. ಎಸ್.ಜಿ. ಸಿದ್ದರಾಮಯ್ಯಗೆ ಅಂಬಿಕಾತನಯದತ್ತ' ರಾಷ್ಟ್ರೀಯ ಪ್ರಶಸ್ತಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ವರಕವಿ ಡಾ. ದ.ರಾ. ಬೇಂದ್ರೆಯವರ ಜನ್ಮದಿನದ ಅಂಗವಾಗಿ ಕೊಡಮಾಡುವ `ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ. ೩೧ರಂದು ಆಯೋಜಿಸಲಾಗಿದೆ. ಧಾರವಾಡದ ನವೋದಯ ಸಾಹಿತ್ಯದ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ ಹಾಗೂ ಬೆಂಗಳೂರಿನ ಕವಿ, ವಿಮರ್ಶಕ, ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬೇಂದ್ರೆ ಭವನದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ 50 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದರು.