ಜಿಲ್ಲೆ

ಆಂಬುಲೆನ್ಸ್ ಬೆಂಕಿಗಾಹುತಿ

ಮೈಸೂರು: ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ವಾಹನ ಸುಟ್ಟುಹೋಗಿದೆ.

ಹೆಬ್ಬಾಳು ರಿಂಗ್ ರಸ್ತೆಯ ಭಾರತ್ ಕ್ಯಾನ್ಸರ್ ಆಸ್ಪತ್ರೆ ಎದುರು ಮಂಗಳವಾರ ಸಂಜೆ ಕೆಆರ್‌ಎಸ್ ರಸ್ತೆ ಕಡೆಯಿಂದ ಬರುತ್ತಿದ್ದ ಆಂಬುಲೆನ್ಸ್‌ನಲ್ಲಿ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಆಂಬುಲೆನ್ಸ್ ಅನ್ನು ರಸ್ತೆ ಬದಿ ನಿಲ್ಲಿಸಿ ಕೆಳಗೆ ಇಳಿದು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆ ಇಡೀ ಆಂಬುಲೆನ್ಸ್ ವಾಹನವನ್ನು ಆವರಿಸಿತು.

ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಸಂಬಂಧ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.