ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಸಾರ್ವಜನಿಕ ಆಂಬುಲೆನ್ಸ್ ವೇಣೂರಿನಲ್ಲಿ ಲೋಕಾರ್ಪಣೆಗೊಂಡಿತು. ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಬೆಳ್ತಂಗಡಿ ಯುವಜನ ಒಕ್ಕೂಟ ಜಂಟಿ ಆಶ್ರಯದಲ್ಲಿ ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟ, ಮುಕ್ತ ಕಬಡ್ಡಿ ಪಂದ್ಯಾಟ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.
ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್, ಮಾಜಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ, ಮಂಗಳೂರು ಒಕ್ಕಲಿಗ ಗೌಡರ ಸೇವಾ ಸಂಘ ಉಪಾಧ್ಯಕ್ಷ ಭಾಸ್ಕರ ದೇವಸ್ಯ, ಗುರುವಾಯನಕೆರೆ ನವಶಕ್ತಿ ಗ್ರೂಪ್ಸ್ ರಾಜೇಶ್, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಆಂಬುಲೆನ್ಸ್‌ಗೆ ಆಕ್ಸಿಜನ್, ಸ್ಟ್ರಕ್ಚರ್ ವ್ಯವಸ್ಥೆ ಮಾಡಿದರು.
ವಿಜಯರಾಜ್ ಅಧಿಕಾರಿ ಕುಟುಂಬಸ್ಥರು, ಮಂಗಳೂರು ಒಕ್ಕಲಿಗ ಗೌಡ ಸೇವಾ ಸಂಘ ನಿರ್ದೇಶಕ ರಕ್ಷಿತ್ ಪುತ್ತಿಲ, ಜಿಲ್ಲಾ ಪಂಚಾಯಿಯಿ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ವೇಣೂರು-ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್, ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಶ್ರೀನಿವಾಸ್ ಗೌಡ, ವಕೀಲ ವಸಂತ ಮರಕುಡ, ಉದ್ಯಮಿ ಜಗದೀಶ ನಾಯಕ್ ಉಪಸ್ಥಿತರಿದ್ದರು.
ಮಧ್ಯಾಹ್ನದ ಕಾರ್ಯಕ್ರಮವನ್ನು ವೇಣೂರು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉದ್ಘಾಟಿಸಿದರು. ಮಾಜಿ ಶಾಸಕ ಪ್ರಭಾಕರ ಬಂಗೇರ ಅಧ್ಯಕ್ಷತೆ ವಹಿಸಿದ್ದರು.
ಮೂಡುಬಿದಿರೆ ವಕೀಲ ನಾಗೇಶ್ ಶೆಟ್ಟಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಮಾಜಿ ಮೊಕ್ತೇಸರ ಪುರುಷೋತ್ತಮ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಪ್ರಭಾಕರ ಹಟ್ಟಾಜೆ, ವೇಣೂರು ಪಂಚಾಯಿತಿ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಕಬಡ್ಡಿ ಅಸೋಸಿಯೇಷನ್ ಜಿಲ್ಲಾ ಉಪಾಧ್ಯಕ್ಷ ನಾಮ್‌ದೇವ್, ಯುವಕಜನ ಒಕ್ಕೂಟ ಕಾರ್ಯದರ್ಶಿ ಚಿದಾನಂದ ಇಡ್ಯ, ದಾನಿ ಗಣೇಶ್ ನಾರಾಯಣ ಪಂಡಿತ್ ಮೂಡುಕೋಡಿ, ಕಬಡ್ಡಿ ತೀರ್ಪುಗಾರರ ಮಂಡಳಿ ಅಧ್ಯಕ್ಷ ಪ್ರಭಾಕರ ನಾರಾವಿ, ಗ್ರಾಪಂ ಸದಸ್ಯ ನೇಮಯ್ಯ ಕುಲಾಲ್ ಉಪಸ್ಥಿತರಿದ್ದರು.
ರಾಜ್ಯಯುವ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಲಾಯಿಲ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ ಕುಮಾರ್ ಲಾಯಿಲ, ನಿರೂಪಕಿ ಪ್ರಜ್ಞಾ ಒಡಿಲ್ನಾಳ, ಬಹುಮುಖ ಪ್ರತಿಭೆ ಚಂದ್ರಹಾಸ ಬಳೆಂಜ ಅವರನ್ನು ಗೌರವಿಸಲಾಯಿತು. ವೇಣೂರು ಸೇವಾ ಸಂಗಮ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ವಿಜಯ ಗೌಡ ಸ್ವಾಗತಿಸಿದರು. ಯುವ ಸೇವಾ ಸಂಗಮ ಸೇವಾ ಟ್ರಸ್ಟ್‌ನ ಟ್ರಸ್ಟಿ ಸುಧೀರ್ ವಂದಿಸಿದರು.