ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದರು. ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಬೆಟ್ಟದಲ್ಲಿ ಅಮಿತ್ ಷಾ ಅವರಿಗೆ ದೇವಾಲಯದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಈ ಸಂದರ್ಭ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಇತರರು ಇದ್ದರು.