ಜಿಲ್ಲೆ

ಈ ಬಾರಿಯೂ ಬಿಜೆಪಿ ಸರ್ಕಾರ: ಅಮಿತ್ ಷಾ ವಿಶ್ವಾಸ

reportermys

ಮಡಿಕೇರಿ:

ಕರಾವಳಿ ಕರ್ನಾಟಕದಲ್ಲಿ ಶೇ. ೧೦೦ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆ ಆಗಲಿದ್ದಾರೆ ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದರು. ಕೊಡಗಿನಲ್ಲಿ ನಮಗೆ ಪ್ರತಿಸ್ಪರ್ಧಿಗಳೇ ಇಲ್ಲ. ಹಾಗಾಗಿ ಇಲ್ಲಿಯ ೨ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಬೆಟ್ಟಗುಡ್ಡಗಳಿಂದ ಕೂಡಿರುವ ಇಷ್ಟು ಚಿಕ್ಕ ಜಿಲ್ಲೆಯಲ್ಲಿ ಪ್ರಮಾಣದಲ್ಲಿ ಜನ ಸೇರಿರುವುದೇ ಇದಕ್ಕೆ ಸಾಕ್ಷಿ ಎಂದರು.

ರಾಜ್ಯದಲ್ಲೂ ಬಿಜೆಪಿಗೆ ಸಂಪೂರ್ಣ ಬಹುಮತ ಬರಲಿದ್ದು, ಈ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು. ಮಡಿಕೇರಿಯಲ್ಲಿ ಶನಿವಾರ ನಡೆದ ರೋಡ್ ಶೋ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅಮಿತ್ ಷಾ ಕಾಂಗ್ರೆಸ್‌ನವರು ಮೋದಿ ಬಗ್ಗೆ ಕೆಟ್ಟದಾಗಿ ಮಾತನಾಡ್ತಾರೆ, ಅದು ಅವರ ಸಂಸ್ಕೃತಿ ಕಾಂಗ್ರೆಸ್ ನಾಯಕರ ಮಾತು ಬಿಜೆಪಿಯನ್ನು ಮತ್ತಷ್ಟು ಬಲಗೊಳಿಸಲಿದೆ ಎಂದರು.