ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿನಿ ಎಸ್.ಅಮೃತಾ ಡಿಸ್ಕಸ್ ಎಸೆತದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. 
ಜಿಲ್ಲೆ

ಡಿಸ್ಕಸ್ ಥ್ರೋನಲ್ಲಿ ಅಮೃತಾ ಪ್ರಥಮ

ರವಿಕುಮಾರ್ ಪಿ. ಕೆ

ನಂಜನಗೂಡು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 44ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿನಿ ಎಸ್.ಅಮೃತಾ ಡಿಸ್ಕಸ್ ಎಸೆತದಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಎಸ್.ಅಮೃತಾ ಡಿಸ್ಕಸ್ ಎಸೆತದಲ್ಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ಮಹತ್ವದ ಸಾಧನೆ ತೋರಿದ್ದಾರೆ. ಸಾಧಕ ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕರು ಅಭಿನಂದಿಸಿದ್ದಾರೆ.