ಬೆಂಗಳೂರು: ಮೂಕ ಪ್ರಾಣಿಗಳ ಮೇಲೆ ಮನುಷ್ಯನ ಅಟ್ಟಹಾಸ ಮೀತಿ ಮೀರುತ್ತಿದ್ದು, ಮುಗ್ದ ಶ್ವಾನಗಳಿಗೆ ವಿಷ ಉಣಿಸಿ ಕೊಲೆ ಮಾಡಿರುವ ಘಟನೆ ಬೆಳಗಳೂರಿನಲ್ಲಿ ನಡೆದಿದೆ. 18 ಶ್ವಾಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್‌ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ.
ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತುಹೋಗಿದೆ.
ನಾಯಿಗಳ ದೇಹವನ್ನ ಚೀಲದಲ್ಲಿ ಹಾಕಿ ತುಂಬಲಾಗಿದೆ. ಈ ಬಗ್ಗೆ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.