ಹನಗೋಡು ಹೋಬಳಿಯ ಅರಸುಕಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೇ ವಿದ್ಯಾರ್ಥಿ ಮಂಜುನಾಥ್ ಅವರು ಕಂಪ್ಯೂಟರ್ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಮತ್ತು ಲೇಖನಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಹರೀಶ್, ನೇತ್ರವತಿ, ಚಂದ್ರು ಇತರರಿದ್ದರು. 
ಜಿಲ್ಲೆ

ಓದಿದ ಶಾಲೆಗೆ ಕಂಪ್ಯೂಟರ್ ಕೊಟ್ಟ ಹಳೇ ವಿದ್ಯಾರ್ಥಿ

ಎಂ.ರವಿ

ಹನಗೋಡು: ಹೋಬಳಿಯ ಅರಸುಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಿರಿಯ ವಿದ್ಯಾರ್ಥಿ ಎಂ.ಮಂಜು ಅವರು ಕಂಪ್ಯೂಟರ್ ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳು ಮತ್ತು ಲೇಖನಿ ಸಾಮಗ್ರಿಗಳನ್ನು ಬುಧವಾರ ಕೊಡುಗೆಯಾಗಿ ನೀಡಿದರು.

ನಂತರ ಮಂಜುನಾಥ್ ಮಾತನಾಡಿ, ನಾವು ಎಷ್ಟೇ ದೊಡ್ಡ ವಿದ್ಯಾವಂತರಾಗಿದ್ದರೂ ನಮಗೆ ಬಾಲ್ಯದ ಶಿಕ್ಷಣ ನೀಡಿದ ಶಾಲೆಯನ್ನು ಮರೆಯಬಾರದು. ಇತ್ತೀಚಿನ ದಿನಗಳಲ್ಲಿ ವಿದ್ಯೆ ಕಲಿತರೂ, ಕಂಪ್ಯೂಟರ್ ಜ್ಞಾನವಿಲ್ಲದಿದ್ದರೆ ಉಪಯೋಗವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ಎಲ್ಲ ಕ್ಷೇತ್ರವು ಡಿಜಿಟಲೀಕರಣಗೊಳ್ಳುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಶಿಕ್ಷಣ ಪರಿಚಯ ಮಾಡಿಕೊಡಬೇಕಿದೆ. ಅದರಲ್ಲೂ ನಮ್ಮ ಊರಿನ ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಹೊಂದಬೇಕು. ಸರ್ಕಾರಿ ಶಾಲಾ ಮಕ್ಕಳು ಯಾರಿಗೂ ಕಮ್ಮಿ ಇಲ್ಲದಂತೆ ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ತಂತ್ರಜ್ಞಾನದ ಅವಶ್ಯಕತೆ ಅರಿತು ಕಂಪ್ಯೂಟರ್‌ಅನ್ನು ಶಾಲೆಗೆ ಕೊಡುಗೆಯಾಗಿ ನೀಡುತ್ತಿದ್ದೇನೆ ಎಂದು ತಿಳಿಸಿದರು.

ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ್, ಗ್ರಾಮಸ್ಥರಾದ ನೇತ್ರಾವತಿ, ಚಂದ್ರು, ದೇವರಾಜು, ಎಚ್.ಎನ್.ಮಂಜು, ಹರೀಶ್ ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಮತ್ತು ಹಿರಿಯ ವಿದ್ಯಾರ್ಥಿ ಬಳಗದವರು, ಸಹಶಿಕ್ಷಕರು ಇದ್ದರು.