ಕಾರ್ಕಳ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜು ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಪದವಿ ಪೂರ್ವ ವಿಭಾಗದ ಮೈಸೂರು ವಿಭಾಗೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಾದ ಅನಮಯ ಯೋಗೀಶ್ ದಿವಾಕರ್ ಮತ್ತು ತನಿಷ್ಕಾ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಪ್ರಾಂಶುಪಾಲ, ಉಪನ್ಯಾಸಕ, ಉಪನ್ಯಾಸಕೇತರ ವರ್ಗದವರು ಅಭಿನಂದಿಸಿದ್ದಾರೆ.