ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಉತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಅವರ ಪ್ರಧಾನ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶಾಂಭವಿ ನದಿ ತೀರದಲ್ಲಿ ಶ್ರೀ ದೇವರಿಗೆ ಕಲಶ ಪೂರಣ, ದೇಗುಲದಲ್ಲಿ ಶ್ರೀ ಅನಂತವ್ರತ ವಿಶೇಷ ಪೂಜೆ, ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಆನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಶ್ವೇತಾ, ಗೋಪಾಲಕೃಷ್ಣ ಭಟ್, ನಾಗೇಶ್ ಬಪ್ಪನಾಡು, ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.