ಹೊಸನಗರ: ಜಿಲ್ಲಾಮಟ್ಟದ ರಸಪ್ರಶ್ನೆಯಲ್ಲಿ ನಗರ ಸರ್ಕಾರಿ ಪ್ರೌಢಶಾಲೆಯ ಎಸ್.ಕೆ.ಅನನ್ಯಾ, ಮತ್ತು ಸಿ.ಸಾನಿಕಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಏಡ್ಸ್ ನಿಯಂತ್ರಣ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗದಲ್ಲಿ ಪ್ರೌಢಶಾಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನ ಏರ್ಪಡಿಸಿದ್ದವು. ದ್ವಿತೀಯ ಸ್ಥಾನವನ್ನು ಹೊಸನಗರ ಗುರೂಜಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಮಧುರ ಆರ್.ನಾಯಕ್, ಸುಬ್ರಹ್ಮಣ್ಯ ಶೆಟ್ಟಿ ಪಡೆದುಕೊಂಡಿದ್ದಾರೆ. ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಬಾಲಕಿಯರ ವಿಭಾಗದ ಯೋಗ ಸ್ಪರ್ಧೆಯಲ್ಲಿ ನಗರ ಸರ್ಕಾರಿ ಪ್ರೌಢಶಾಲೆಯ ಆರ್.ರಶ್ಮಿತಾ ಪ್ರಥಮ, ಆರ್.ಸೃಷ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕೆ.ಜಿ.ಪ್ರದೀಪ್, ಡಿ.ಅರ್ಜುನ್ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.