ಜಿಲ್ಲೆ

ರಾಜ್ಯಮಟ್ಟದ ಕಥಾಲಾಪ, ಚಿಣ್ಣರ ಚಿಲಿಪಿಲಿ

Dakshina Kannada

ಮಂಗಳೂರು: ‘ಅನಾವರಣ’ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ(ಎಎಸ್‌ಎಸ್‌ಎಪಿ) ಆಶ್ರಯದಲ್ಲಿ ರಾಜ್ಯಮಟ್ಟದ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಭಾನುವಾರ ಜರುಗಿತು.

ಎನ್‌ಎಸ್‌ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಪ್ರತಿಷ್ಠಾನ ಉದ್ಘಾಟಿಸಿ, ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿವೆ. ಸರ್ಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ನಡೆಸುತ್ತಿದೆ. ಈ ಕಾರಣದಿಂದ ಭಾರತದ ಅನೇಕ ಹಳ್ಳಿಗಳು ಅಭಿವೃದ್ಧಿಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ ಎಂದರು.

ಪ್ರತಿಷ್ಠಾನದ ಅಧ್ಯಕ್ಷೆ, ಕವಯಿತ್ರಿ, ವಕೀಲೆ ಪರಿಮಳಾ ರಾವ್ ಕೆ. ಅಧ್ಯಕ್ಷತೆ ವಹಿಸಿದ್ದರು. ಕೆಎಸ್‌ಎಸ್‌ಎಪಿ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಕವಯಿತ್ರಿ ಗೀತಾ ಲಕ್ಷ್ಮೀಶ್ ಮತ್ತಿತರರು ಭಾಗವಹಿಸಿದ್ದರು.

ಕವಿ ಡಾ.ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಕಥಾಲಾಪ ಕಾರ್ಯಕ್ರಮ ನಡೆಯಿತು. ವ.ಉಮೇಶ್ ಕಾರಂತ್, ಅಶ್ವಿಜಾ ಶ್ರೀಧರ್, ಜಯರಾಮ ಪಡ್ರೆ, ರಾಮಾಂಜಿ ನಮ್ಮ ಭೂಮಿ, ಗೋಪಾಲಕೃಷ್ಣ ಶಾಸ್ತ್ರಿ, ರೇಖಾ ಸುದೇಶ್ ರಾವ್, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಮಾನ್ವಿ ಮಂಗಳೂರು, ಹಿತೇಶ್ ಕುಮಾರ್ ಎ., ಸುಗಂಧಿ ಶ್ಯಾಮ್, ಪದ್ಮನಾಭ ಮಿಜಾರು, ದೇವರಾಜ್ ಕುಂಬ್ಳೆ, ಚಿತ್ರಕಲಾ ದೇವರಾಜ್, ರೇಮಂಡ್ ಡಿ’ಕುನ್ಹಾ ತಾಕೊಡೆ, ಅನುರಾಧಾ ರಾಜೀವ್, ಹರೀಶ್ ಮೆಲ್ಕಾರ್, ದಯಾಮಣಿ ಎಕ್ಕಾರ್, ವಾಣಿ ಲೋಕಯ್ಯ, ಸೌಮ್ಯಾ ಆರ್.ಶೆಟ್ಟಿ, ಎ.ಕೆ. ಕುಕ್ಕಿಲ ಸ್ವರಚಿತ ಕತೆ ವಾಚಿಸಿದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆಶ್ವಿಜಾ ಶ್ರೀಧರ್ ಪ್ರಾರ್ಥಿಸಿದರು. ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.