ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಜ್ಞಾನದ ಹರಿವು ಹರಿದಷ್ಟೂ ಜನರಲ್ಲಿ ಅರಿವಿನ ಜಾಗೃತಿ ಹೆಚ್ಚುತ್ತದೆ. ಪಡುಕುತ್ಯಾರು ಮೂಲಮಠದಲ್ಲಿ ಪಂಚಶಿಲ್ಪದ ಜತೆಗೆ ವಾಸ್ತುಶಿಲ್ಪ ಕಲಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.
ಪಡುಕುತ್ಯಾರಿನಲ್ಲಿ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಜನ್ಮವರ್ಧಂತ್ಯುತ್ಸವ ಧರ್ಮ ಸಂಸತ್‌ನಲ್ಲಿ ಗುರುವಾರ ಆಶೀರ್ವಚನ ನೀಡಿದರು.
ಪುರೋಹಿತ ಹಿರಣ್ಯ ವೆಂಕಟೇಶ ಭಟ್ ಮಾತನಾಡಿದರು. ಮಹಾಸಂಸ್ಥಾನ ಆಸ್ಥಾನ ವಿದ್ವಾಂಸ ಪಂಜ ಭಾಸ್ಕರ ಭಟ್ ವಿಶೇಷ ಉಪನ್ಯಾಸ ನೀಡಿದರು. ಕಟಪಾಡಿ ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪ್ರತಿಷ್ಠಾನ ಅಧ್ಯಕ್ಷ ವಿ.ಶ್ರೀಧರ ಆಚಾರ್ಯ ವಡೇರಹೋಬಳಿ ಅಧ್ಯಕ್ಷತೆ ವಹಿಸಿದ್ದರು. ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ.ವಿ.ಗಂಗಾಧರ ಆಚಾರ್ಯ ಉಡುಪಿ, ದಿನೇಶ್ ಆಚಾರ್ಯ ಪಡುಬಿದ್ರಿ, ಮುರಹರಿ ಆಚಾರ್ಯ ಉಡುಪಿ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಚಂದ್ರಯ್ಯ ಆಚಾರ್ಯ ಕಳಿ ಉಪ್ರಳ್ಳಿ, ಗಜಾನನ ಎನ್.ಆಚಾರ್ಯ ನೀರಕಂಠ, ಕೆ.ಎಂ.ಗಂಗಾಧರ್ ಆಚಾರ್ಯ, ಬಿ.ಎಂ.ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ವಕೀಲ ಕೆ.ಪ್ರಭಾಕರ ಆಚಾರ್ಯ ಕೋಟೆಕಾರು, ಸಿ.ಎ.ಶ್ರೀಧರ ಆಚಾರ್ಯ ಪನ್ವೇಲ್, ಜಗದೀಶ್ ಆಚಾರ್ಯ ಪಡುಪಣಂಬೂರು, ಶಂಕರ ಬಲವಂತರಾವ್ ಅಥಣಿ, ಪುರೋಹಿತ್ ಜಯಕರ ಆಚಾರ್ಯ ಮೂಡುಬಿದಿರೆ, ಜನಾರ್ದನ ಆಚಾರ್ಯ ಅರಿಕ್ಕಾಡಿ, ಬಿ.ಮೋಹನ್ ಕುಮಾರ್ ಬೆಳ್ಳೂರು, ಗಣೇಶ್ ಆಚಾರ್ಯ ಕೆಮ್ಮಣ್ಣು, ದಿನೇಶ್ ಆಚಾರ್ಯ ಕಿನ್ನಿಗೋಳಿ, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ವಿದ್ವಾನ್ ಕೇಶವ ಶರ್ಮಾ ಇರುವೈಲು ಉಪಸ್ಥಿತರಿದ್ದರು.
ಲೋಲಾಕ್ಷ ಶರ್ಮ ಪ್ರಸ್ತಾವಿಸಿದರು. ಲೋಕೇಶ್ ಎಂ.ಬಿ.ಆಚಾರ್ ಕಂಬಾರ್ ಸ್ವಾಗತಿಸಿದರು. ಗೀತಾಚಂದ್ರ ಆಚಾರ್ಯ ಕಾರ್ಕಳ ನಿರೂಪಿಸಿದರು. ಅರವಿಂದ ಆಚಾರ್ಯ ವಂದಿಸಿದರು.
ಶ್ರೀಗಳ ಜನ್ಮವರ್ಧಂತಿ ಅಂಗವಾಗಿ ಶ್ರೀ ಗಣೇಶ ಅಥರ್ವಶಿರ್ಷ ಹೋಮ, ಪೂರ್ಣಮಾನ ನವಗ್ರಹ ಹೋಮ, ಶತರುದ್ರ ಯಾಗ, ಮಹಾಮೃತ್ಯುಂಜಯ ಹೋಮ, ಶ್ರೀ ಧನ್ವಂತರೀ ಹೋಮ, ಶ್ರೀ ಮಹಾ ಸರಸ್ವತೀ ಯಜ್ಞ ವೈದಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಶಿಷ್ಯವೃಂದದವರಿಂದ ಜಗದ್ಗುರುಗಳವರ ತುಲಾಭಾರ ಸೇವೆ ಗುರುಪಾದುಕಾಪೂಜೆ ನೆರವೇರಿತು.