ಮಡಿಕೇರಿ:
ಕುಂದಚೇರಿ ಗ್ರಾಮ ಪಂಚಾಯಿತಿಗೆ ಒಳಪಡುವ ಕೋಪಟ್ಟಿ ದೇವಸ್ಥಾನ, ಕೋಪಟ್ಟಿ ಶಾಲೆ, ಚೆರಂಡೇಟಿ, ಚಿಟ್ಟಿಮಾನಿ ಪದಕಲ್ಲು, ಕೋಡಿ ಮೊಟ್ಟೆ, ತಾಪ್ರಿಕಾಡು, ಪೂವಲೆ ಮಾನಿ, ಸಿಂಗತ್ತೂರು ಸೇರಿ ಒಟ್ಟು 9 ಅಂಗನವಾಡಿ ಕೇಂದ್ರಗಳಿಗೆ ಕುಂದಚೇರಿ ಗ್ರಾ.ಪಂ. ವತಿಯಿಂದ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಮೇಲ್ವಿಚಾರಕಿ ಮಾರ್ಗದರ್ಶನದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಸುಶಿ, ಯೋಗ್ಯತಾ, ಈಶ್ವರಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರಿಗೆ ಜುರ್ಚಿಗಳ ಬೇಡಿಕೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚೆಟ್ಟಿಮಾನಿ ಅಂಗನವಾಡಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕುರ್ಚಿಗಳನ್ನು ವಿತರಿಸಲಾಯಿತು.
ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ
ದಿನೇಶ್ ಇದೇ ಸಂದರ್ಭ ತಿಳಿಸಿದರು.
ಕುಂದಚೇರಿ ಗ್ರಾಮ ಪಂಚಾಯಿತಿಗೆ ಒಳಪಟ್ಟ 9 ಅಂಗನವಾಡಿ ಕಾರ್ಯಕರ್ತೆಯರು ಉತ್ತಮವಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯತಿಯಿAದ ದೊರಕುವ ಎಲ್ಲ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಗೆ ನೀಡಲಾಗುವುದು ಎಂದು ಸದಸ್ಯ ಹ್ಯಾರಿಸ್ ಹೇಳಿದರು.
ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ ಗ್ರಾಮ ಪಂಚಾಯಿತಿಗೆ ಒಳಪಡುವ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಉದ್ಯಾನವನ, ಜಾರುಬಂಡಿ, ಜೋಕಾಲಿ ಒಳಗೊಂಡAತೆ ಒಳಾಂಗಣ ಮತ್ತು ಹೊರಾಂಗಣ ಆಟಿಕೆಗಳನ್ನು ಗ್ರಾಮ ಪಂಚಾಯ್ತಿವತಿಯಿAದ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಪಿಡಿಒ ಯಾದವ್, ಹಂತ ಹಂತವಾಗಿ ಅಂಗನವಾಡಿಗಳಿಗೆ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುವುದಾಗಿ ತಿಳಿಸಿದರು.
ಚೆಟ್ಟಿಮಾನಿ ಅಂಗನವಾಡಿ ಕಾರ್ಯಕರ್ತೆ ಸುಶಿ ಮತ್ತಿತರರು ಇದ್ದರು.