ಜಿಲ್ಲೆ

ಪ್ರಾಥಮಿಕ ಶಿಕ್ಷಣಕ್ಕೆ ಅಂಗನವಾಡಿ ಅಡಿಗಲ್ಲು

ಕುಮಟಾ: ಪ್ರಾಥಮಿಕ ಶಿಕ್ಷಣಕ್ಕೆ ಪೂರಕ ಮತ್ತು ಪ್ರೇರಕ ಕಾರ್ಯಗಳು ಅಂಗನವಾಡಿ ಕೇಂದ್ರಗಳಲ್ಲಿ ಆರಂಭಗೊಳ್ಳುತ್ತವೆ. ಆದ್ದರಿಂದ ಅಂಗನವಾಡಿಗಳೇ ಮಕ್ಕಳ ಶಿಕ್ಷಣ ಮತ್ತು ಸರ್ವತೋಮುಖ ಏಳಿಗೆಯ ಅಡಿಗಲ್ಲಾಗಿವೆ ಎಂದು ಜಿ.ಪಂ. ಮಾಜಿ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು.

ತಾಲೂಕಿನ ಸೊಪ್ಪಿನ ಹೊಸಳ್ಳಿ ಗ್ರಾ.ಪಂ ವ್ಯಾಪ್ತಿಯ ಬಂಗಣೆಯಲ್ಲಿ ಸ್ಥಳೀಯ ಬಾಲ ವಿಕಾಸ ಸಮಿತಿ ಹಾಗೂ ಕುಮಟಾ ಕನ್ನಡ ಸಂಘದ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗುರು ಮಾತೆಯರಿಗೆ ವಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಿಡಿಪಿಒ ಶೀಲಾ ಪಾಟೀಲ ಮಾತನಾಡಿ, ಅಂಗನವಾಡಿ ಕೇಂದ್ರಗಳು ಉತ್ತಮವಾಗಿದ್ದಾಗ ಉತ್ತಮ ಸಮಾಜ ನಿಮಾರ್ಣ ಸಾಧ್ಯವಿದೆ. ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು.

ನಿವೃತ್ತಿ ಅಂಚಿನಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಾದ ಉಷಾ ನಾಯ್ಕ, ಪದ್ಮಾವತಿ ನಾಯ್ಕ, ದಾಕ್ಷಾಯಣಿ ನಾಯ್ಕ, ಕುಸುಮಾ ರವೀಂದ್ರ ನಾಯ್ಕ ಕಡತೋಕಾ, ಚಂದ್ರಿಕಾ ಜಿ. ಶೆಟ್ಟಿ ಕೆಕ್ಕಾರ, ಕುಸುಮಾ ಉದಯ ನಾಯ್ಕ, ಅಶ್ವಿನಿ ಉದಯ ಭಟ್ಟ, ಶಶಿಕಲಾ ನಾಯ್ಕ, ವಿಜಯಾ ನಾಯ್ಕ, ಕಲಾವತಿ ಆರ್. ಮರಾಠಿ ಅವರನ್ನು ಸನ್ಮಾನಿಸಲಾಯಿತು.

ಕುಮಟಾ ಕನ್ನಡ ಸಂಘದ ಅಧ್ಯಕ್ಷ ಸದಾನಂದ ದೇಶಭಂಡಾರಿ, ಕೆ.ಡಿ.ಸಿ.ಸಿ. ಬ್ಯಾಂಕ್ ವ್ಯವಸ್ಥಾಪಕ ಎಸ್.ಎನ್.ಭಟ್ಟ, ಗ್ರಾ.ಪಂ ಸದಸ್ಯ ಈಶ್ವರ ಮರಾಠಿ, ಎಸ್‌ಡಿಎಂಸಿ ಅಧ್ಯಕ್ಷ ಗಣಪತಿ ಮರಾಠಿ, ಶೇಷ ಜಾಯು ಮರಾಠಿ, ಕುಮಾರಿ ಮರಾಠಿ ತಲಗೋಡ, ವಿಮಲಾ ಮರಾಠಿ, ಸುರೇಶ ಮರಾಠಿ, ಷಣ್ಮುಖ ಮರಾಠಿ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಯಶೋಧಾ ಮರಾಠಿ ಇತರರು ಇದ್ದರು.