ಜಿಲ್ಲೆ

ಮಗುವಿಗೆ ಕಾರ್ಯಕರ್ತೆಯಿಂದ ಥಳಿತ; ವಿಡಿಯೋ ವೈರಲ್​

lakshmihegde

ಕಾರಟಗಿ(ಕೊಪ್ಪಳ): ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಂಗಮ್ಮ ವಸ್ತ್ರದ್, ಮಗುವಿಗೆ ಅಕ್ಷರಾಭ್ಯಾಸ ಮಾಡಿಸುವ ಸಲುವಾಗಿ ಹಿಗ್ಗಾ-ಮುಗ್ಗಾ ಥಳಿಸಿರುವ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ.

ಇತರೆ ಮಕ್ಕಳು ಸಂಗಮ್ಮ ಬಳಿ ವರ್ಣಮಾಲೆ ಬರೆಸಿಕೊಂಡು ಹೋಗಿದ್ದಾರೆ. ಆದರೆ, ಒಂದು ಮಗು ಮಾತ್ರ ಅಕ್ಷರಗಳನ್ನು ಬರೆಸಿಕೊಂಡಿಲ್ಲ. ಇದನ್ನೇ ನೆಪ ಮಾಡಿಕೊಂಡ ಕಾರ್ಯಕರ್ತೆ ಮಗುವಿಗೆ ಬೈದು, ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ. ಕಾರ್ಯಕರ್ತೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಸಂಗಮ್ಮ ವಸ್ತ್ರದ್ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರೇಂದ್ರ ನಾವದಗಿ ತಿಳಿಸಿದ್ದಾರೆ.

ಮಗುವಿನ ಮನೆಗೆ ಭೇಟಿ ನೀಡಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಮಗು ಆರೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಲಾಗಿದೆ. ಕಾರ್ಯಕರ್ತೆ ಗ್ರಾಮ ತೊರೆದಿದ್ದಾರೆ. ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.