ಜಿಲ್ಲೆ

ಪ್ರಾಣಿ ಪಕ್ಷಿಗಳಿಗೂ ಮನುಷ್ಯರಂತೆ ಬದುಕುವ ಹಕ್ಕಿದೆ

ಹೆಬ್ರಿ: ಪರಿಸರದಲ್ಲಿ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಂತೆ ಬದುಕುವ ಹಕ್ಕಿದೆ. ಪರಿಸರದಲ್ಲಿ ಸಮತೋಲನ ಕಂಡುಕೊಂಡಾಗ ವಾತ್ರ ಎಲ್ಲರ ಬದುಕು ಉತ್ತಮವಾಗಿ ನಡೆಯುತ್ತದೆ. ವಿದ್ಯಾರ್ಥಿಗಳು ದಿನನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ವಾಡಬೇಕು ಎಂದು ವನ್ಯಜೀವಿ ಸಂರಕ್ಷಕ ಜೋಯಲ್ ಕುರಿಯಾ ಹೇಳಿದರು.

ಕುದುರೆಮುಖ ವನ್ಯಜೀವಿ ವಿಭಾಗದ ಸೋಮೇಶ್ವರ ವನ್ಯಜೀವಿ ವಲಯ, ಹೆಬ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ರಾಷ್ಟ್ರೀಯ ಹಸಿರು ಪಡೆ, ಇಕೋ ಕ್ಲಬ್ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೋಮೇಶ್ವರ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಚಿದಾನಂದಪ್ಪ ಜಿ. ವಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ವನ್ಯಜೀವಿ ಸಂರಕ್ಷಕ ವಲಯ ಸಿಬ್ಬಂದಿ ಮನೋಜ್ ಕುವಾರ್, ಸುಕೇತ್, ಪ್ರಾಂಶುಪಾಲ ಉಮೇಶ್, ಉಪ ಪ್ರಾಂಶುಪಾಲ ದಿವಾಕರ್, ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಶೆಟ್ಟಿ ಇದ್ದರು.