ಜಿಲ್ಲೆ

ಅನಿತಾ ಭಾಸ್ಕರ್‌ಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ಮಡಿಕೇರಿ: ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಅವರನ್ನು ೨೦೨೩ನೇ ಸಾಲಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ಟೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಅನಿತಾ ಭಾಸ್ಕರ್ ಅವರು ಪ್ರವಾಸೋದ್ಯಮ ಕೇಂದ್ರ ಕಚೇರಿಯಲ್ಲಿ ಉಪನಿರ್ದೇಶಕರಾಗಿ ಕೆಲಸ ನಿರ್ವಹಿಸಿದ ಅವಧಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಸ್ವದೇಶ್ ದರ್ಶನ, ಪ್ರಸಾದ್ ಹಾಗೂ ಸ್ವದೇಶ್ ದರ್ಶನ ೨.೦ ಯೋಜನೆಗಳು ಕರ್ನಾಟಕಕ್ಕೆ ದೊರಕುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಕರ್ನಾಟಕ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಸ್ಟರ್ ಮಾಸ್ಟರ್ ಪ್ಲಾನ್ ಅನುಮೋದನೆ ಹಾಗೂ ಪಡುಬಿದ್ರೆ ಸಮುದ್ರ ತೀರದಲ್ಲಿ (ಉಡುಪಿ ಜಿಲ್ಲೆ) ಬ್ಲೂ ಪ್ಲಾಗ್ ಬೀಚ್ ಯೋಜನೆ ಅನು?್ಟಾನಗೊಳಿಸಿ ಅತ್ಯುತ್ತಮ ಬೀಚ್‌ನ್ನು ಅಭಿವೃದ್ಧಿ ಪಡಿಸಿದ್ದಾರೆ. ಸೈಂಟ್ ಮೇರಿ ದ್ವೀಪವನ್ನು ಅಭಿವೃದ್ಧಿ, ಮಲ್ಪೆ ಬೀಚ್ ಸೀ-ವಾಕ್ ಯೋಜನೆಯನ್ನು ಅನು?್ಟಾನಗೊಳಿಸುವುದರಲ್ಲಿ ಪ್ರಮುಖ ಪಾತ್ರಧಾರಿಗಳಾಗಿದ್ದಾರೆ.

ಉಡುಪಿ ಜಿಲ್ಲೆಯ ಅತ್ಯುತ್ತಮ ಸೇವೆಗಾಗಿ ಇವರಿಗೆ ೨೦೧೯ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಈ ಹಿಂದೆ ನೀಡಿ ಗೌರವಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುವಾಗ ಕೈಗೊಂಡ ಯೋಜನೆಗಳು ಮತ್ತು ಪ್ರವಾಸೋದ್ಯಮ ಇಲಾಖೆಯಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ನೀಡುವ ರಾಜ್ಯ ಮಟ್ಟ ಪ್ರಶಸ್ತಿಯನ್ನು ಪ್ರಧಾನ ಮಾಡಿ, ಸನ್ಮಾನಿಸಿ ಗೌರವಿಸಿದೆ.