ಹೊಸಪೇಟೆ ತಾಲೂಕಿನ ಹೊಸ ಹಂಪಿಯಲ್ಲಿ ಗುರುವಾರ ತಡರಾತ್ರಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು 
ಜಿಲ್ಲೆ

ಆಂಜನೇಯ ಮೂರ್ತಿ ವಿರೂಪಗೊಳಿಸಿದ ದುಷ್ಕರ್ಮಿಗಳು

ಹೊಸಪೇಟೆ: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ಘಟನೆ ತಾಲೂಕಿನ ಹೊಸ ಹಂಪಿಯಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ.

ಗ್ರಾಮದಲ್ಲಿ ಕಳೆದ ಮೂರು ವರ್ಷದ ಹಿಂದೆ ಪ್ರತಿಷ್ಠಾಪನೆಯಾದ ಕಾರ್ಯ ಸಿದ್ದಿ ಶ್ರೀ ಆಂಜನೇಯ ಸ್ವಾಮಿ ಮೂರ್ತಿಯ ಮುಖ ಹೊಡೆದು ವಿರೂಪಗೊಳಿಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆದಿದೆ.

ಡಿವೈಎಸ್ಪಿ ಶರಣ ಬಸವೇಶ್ವರ, ಕಮಾಲಪುರ ಪಿಎಸ್ಐ ಹನುಂತಪ್ಪ, ಹಂಪಿ ಪ್ರವಾಸಿ ಶಿವಕುಮಾರ್ ಪರಿಶೀಲನೆ ನಡೆಸಿದ್ದಾರೆ.