ಮೂಡುಬಿದಿರೆ: ಶಿಕ್ಷಣ ಸಂಸ್ಥೆಗಳು ಬಹುಮಹಡಿ ಕಟ್ಟಡಗಳಿದ್ದ ಮಾತ್ರಕ್ಕೆ ಶ್ರೇಷ್ಠವೆನಿಸಿಕೊಳ್ಳಲಾರವು. ಆ ಕಟ್ಟಡಗಳಿಗೆ ಜೀವಕಳೆ ವಿದ್ಯಾರ್ಥಿಗಳಿಂದ ಮಾತ್ರ ತುಂಬಲು ಸಾಧ್ಯ. ಅಂತಹ ವಿದ್ಯಾರ್ಥಿ ಸಮೂಹ ನೀವಾಗಬೇಕು. ಆಳ್ವಾಸ್‌ನ ವಿದ್ಯಾರ್ಥಿಗಳೇ ಆಳ್ವಾಸ್ ಬ್ರ್ಯಾಂಡ್ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ವಿದ್ಯಾಗಿರಿಯಲ್ಲಿರುವ ಕೃಷಿಸಿರಿ ವೇದಿಕೆಯಲ್ಲಿ ಆಳ್ವಾಸ್ ಕಾಲೇಜು(ಸ್ವಾಯತ್ತ) 2025-26ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ‘ಅಂಕುರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಳ್ವಾಸ್ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಡಾ.ಕುರಿಯನ್, ಶೈಕ್ಷಣಿಕ ಕುಲಸಚಿವ ಡಾ.ಟಿ.ಕೆ.ರವೀಂದ್ರನ್, ಪರೀಕ್ಷಾಂಗ ಕುಲಸಚಿವ ಡಾ.ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.