ಜಿಲ್ಲೆ

ಶೇ.96.1 ಲಾನುಭವಿಗಳಿಗೆ ನೇರ ನಗದು

ಶಿವರಾಜ.ಎಂ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಡಿ ಅನ್ನಭಾಗ್ಯ ಯೋಜನೆಯನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಗ್ರಾಮಾಂತರ ಜಿಲ್ಲಾಡಳಿತ ಮುಂಚೂಣಿಯಲ್ಲಿದೆ. ಇದುವರೆಗೆ ಶೇ.96.1 ಅರ್ಹ ಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ಪ್ರಯೋಜನ ಕಲ್ಪಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ವಿತರಣೆ, ಅಕ್ಕಿ ವಿತರಣೆ ಹಾಗೂ ನಗದು ವಿತರಣೆಯಲ್ಲಿ ಗ್ರಾಮಾಂತರ ಜಿಲ್ಲೆಯಲ್ಲಿ ಗುರಿಮುಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,31,120 ಬಿಪಿಎಲ್ ಪಡಿತರ ಚೀಟಿದಾರರು ಚಾಲ್ತಿಯಲ್ಲಿದ್ದು, ಇದರಲ್ಲಿ 8,07,256 ಪಡಿತರ ಫಲಾನುಭವಿಗಳಿದ್ದಾರೆ. ಬಿಪಿಎಲ್ ಪಡಿತರ ಚೀಟಿಗಳಲ್ಲಿ 14,194 ಅಂತ್ಯೋದಯ ಅನ್ನ ಯೋಜನೆ ಮತ್ತು 2,16,926 ಆದ್ಯತಾ ಕುಟುಂಬ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಲ್ಲಿ ಕಳೆದ ಎರಡು ವರ್ಷದಲ್ಲಿ 7,99,519 ಕ್ವಿಂಟಾಲ್ ಅಕ್ಕಿ ಮತ್ತು 2,44,094 ಕ್ವಿಂಟಾಲ್ ರಾಗಿಯನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2,300 ಹೊಸ ಪಡಿತರ ಚೀಟಿ ವಿತರಣೆ: ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ 2,300 ಹೊಸ ಪಡಿತರ ಚೀಟಿಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಹಾಗೇ ಜು. 2023 ರಿಂದ ಡಿ.2024 ರವರೆಗೆ ಪ್ರತಿ ಫಲಾನುಭವಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂಪಾಯಿಗಳಂತೆ ಪ್ರತಿ ಸದಸ್ಯರಿಗೆ 170 ರೂ,ಗಳನ್ನು ಪಡಿತರ ಚೀಟಿಯ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರ ನಗದು ಜಮೆ ಮಾಡಲಾಗುತ್ತಿತ್ತು. ಫೆ.2025ರ ಬಳಿಕ ನಗದು ಬದಲು 10ಕೆ.ಜಿ ಅಕ್ಕಿಯನ್ನು ನೀಡುತ್ತಿದ್ದಾರೆ.

ಗೃಹಲಕ್ಷ್ಮೀ ಶೇ.96 ಸಾಧನೆ:

ಗೃಹಲಕ್ಷ್ಮಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,25,981 ಫಲಾನುಭವಿಗಳಿದ್ದು, 2,17,421 ಫಲಾನುಭವಿಗಳು ನೋಂದಣಿಯಾಗಿದ್ದಾರೆ, ಶೇ.96% ಪ್ರಗತಿ ಸಾಧಿಸಲಾಗಿದೆ. ದೇವನಹಳ್ಳಿಯಲ್ಲಿ 46688, ದೊಡ್ಡಬಳ್ಳಾಪುರ 65241, ಹೊಸಕೋಟೆಯಲ್ಲಿ 60117, ನೆಲಮಂಗಲದಲ್ಲಿ 45375 ಫಲಾನುಭವಿಗಳು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

------

ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಪಡಿತರ ಚೀಟಿಗಳಿಗೆ ನೀಡಲಾಗುವ ಪಡಿತರ ಪದಾರ್ಥಗಳ ಪ್ರಮಾಣ ಹಾಗೂ ಅವುಗಳ ಒಟ್ಟು ಮೊತ್ತವನ್ನು ಒಂದು ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವ ವ್ಯವಸ್ಥೆಗೆ ಚಾಲನೆ ನೀಡಿದೆ. ಅನ್ನಭಾಗ್ಯ ಯೋಜನೆಯು ಪಡಿತರ ಕುಟುಂಬಗಳಿಗೆ ಆಹಾರ ಭದ್ರತೆ ನೀಡಿ ಜೀವನ ಮಟ್ಟ ಸುಧಾರಿಸುವಲ್ಲಿ ಹಾಗೂ ಆರೋಗ್ಯಕರ ಬದುಕನ್ನು ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ