ಗಂಗೊಳ್ಳಿ: ಕುಂದಾಪುರ ತಾಲೂಕು ಗುಜ್ಜಾಡಿ ಗ್ರಾಮದ ನಾಯಕವಾಡಿಯ ಮನೆಯೊಂದರಲ್ಲಿ ಅಕ್ರಮವಾಗಿ ಇಟ್ಟಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪತ್ತೆಹಚ್ಚಲಾಗಿದ್ದು, ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶ್ಫಕ್ ಎಂಬುವರ ಮನೆಯಲ್ಲಿ ಹಂಜಾ ಮತ್ತು ಗಣೇಶ್ ಎಂಬುವರು ಅಕ್ರಮವಾಗಿ 550 ಕೆ.ಜಿ ಅನ್ನಭಾಗ್ಯದ ಅಕ್ಕಿ ದಾಸ್ತಾನಿಟ್ಟಿದ್ದು, ಈ ಕುರಿತು ಖಚಿತ ಮಾಹಿತಿ ಮೇರೆಗೆ ಕುಂದಾಪುರ ಆಹಾರ ನಿರೀಕ್ಷಕ ಸುರೇಶ್ ಎಚ್.ಎಸ್ ತಂಡ ಅಶ್ಫಕ್ ಮನೆ ಮೇಲೆ ದಾಳಿ ನಡೆಸಿದ್ದು, ಅಕ್ರಮ ದಾಸ್ತಾನು ಪತ್ತೆಹಚ್ಚಿದ್ದಾರೆ.