ಮಧುರೆ: ಹೋಬಳಿಯ ಶ್ರೀ ಶನಿಮಹಾತ್ಮಾ ದೇವಾಲಯದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಸೂರ್ಯೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು. ಸುಮಾರು 2 ಸಾವಿರ ಭಕ್ತರಿಗಾಗಿ ಅನ್ನದಾಸೋಹಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಮುಂಜಾನೆಯಿಂದ ರಾತ್ರಿ 8 ಗಂಟೆವರೆಗೆ ನಿರಂತರ ಅನ್ನ ದಾಸೋಹ ನಡೆಯಿತು. ಸಾವಿರಾರು ಭಕ್ತರು ಶನಿ ಮಹಾತ್ಮ ದೇವರ ದರ್ಶನ ಪಡೆದು ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಸಲ್ಲಿಸಿದ ದೃಶ್ಯ ಕಂಡುಬಂತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಮಧುರೆಯಲ್ಲಿನ ಶ್ರೀ ಶನಿಮಹಾತ್ಮ ದೇಗುಲ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದ್ದು ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ನೆರೆ ಜಿಲ್ಲೆಗಳಿಂದಲೂ ನೂರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸುತ್ತಾರೆ, ವಿಶೇಷವಾಗಿ ಶ್ರಾವಣ ಶನಿವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದರು.
ಮಧುರೆ ಹೋಬಳಿಯ ಶ್ರೀ ಶನಿಮಹಾತ್ಮಾ ದೇವಾಲಯದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಅನ್ನದಾಸೋಹ ಏರ್ಪಡಿಸಲಾಗಿತ್ತು.