ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತ್ಯುತ್ಸವದ ಅಂಗವಾಗಿ ತಾಲೂಕು ವೀರಶೈವ-ಲಿಂಗಾಯಿತ ಮಹಾಸಭಾದ ವತಿಯಿಂದ ಪಟ್ಟಣದ ದುರ್ಗಾ ಭವನ್ ವೃತ್ತದಲ್ಲಿ ಅನ್ನದಾಸೋಹ ನಡೆಯಿತು. 
ಜಿಲ್ಲೆ

ಕೆ.ಆರ್.ಪೇಟೆಯಲ್ಲಿ ಭಕ್ತರಿಗೆ ಅನ್ನದಾಸೋಹ

ಎಂ.ರವಿ

ಕೆ.ಆರ್.ಪೇಟೆ: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತ್ಯುತ್ಸವ ಕಾರ್ಯಕ್ರಮ ಪಟ್ಟಣದಲ್ಲಿ ಸೋಮವಾರ ನಡೆಯಿತು.

ತಾಲೂಕು ವೀರಶೈವ-ಲಿಂಗಾಯಿತ ಮಹಾಸಭಾದ ಅಧ್ಯಕ್ಷ ವಕೀಲ ವಿ.ಎಸ್.ಧನಂಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ವೀರಶೈವ-ಲಿಂಗಾಯಿತ ಮಹಾಸಭಾದ ಕಚೇರಿಯಲ್ಲಿ ತ್ರಿವಿಧ ದಾಸೋಹಿ ಡಾ.ಶಿವಕುಮಾರ್ ಸ್ವಾಮೀಜಿ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಪುಣ್ಯಸ್ಮರಣೆ ಮಾಡಿದ ವೀರಶೈವ ಸಮಾಜದ ಮುಖಂಡರು ಪಟ್ಟಣದ ದುರ್ಗಾ ಭವನ್ ವೃತ್ತದಲ್ಲಿ ಅನ್ನದಾಸೋಹ ನಡೆಸಿದರು.

ತಾಲೂಕು ವೀರಶೈವ-ಲಿಂಗಾಯಿತ ಮಹಾಸಭಾದ ಕಾರ್ಯದರ್ಶಿ ಈರಪ್ಪ, ಸಮಾಜದ ಮುಖಂಡರಾದ ಕೆ.ಎಸ್.ರಾಜೇಶ್, ಶಿವಪ್ಪ, ಬ್ಯಾಂಕ್ ನಂಜುಂಡಪ್ಪ, ಬಸವಲಿಂಗಪ್ಪ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಚೋಕನಹಳ್ಳಿ ಪ್ರಕಾಶ್, ಯೋಗಪಟು ಅಲ್ಲಮ ಪ್ರಭು ಸೇರಿದಂತೆ ಹಲವು ಮುಖಂಡರು ಮತ್ತು ವೀರಶೈವ ಮಹಾಸಭಾದ ನಿರ್ದೇಶಕರು ಕಾರ್ಯಕ್ರಮದಲ್ಲಿದ್ದರು.