ಜಿಲ್ಲೆ

23ರಂದು ಕಡಬ ಪೇಟೆಯಲ್ಲಿ ಅಣ್ಣಾಮಲೈ ಬೃಹತ್ ರೋಡ್ ಶೋ

Avinash R

ಕಡಬ: ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪರ ಏ.23 ರಂದು ಬೆಳಗ್ಗೆ 9ಗಂಟೆಗೆ ಕಡಬ ಪೇಟೆಯಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪ್ರಮುಖ ಪ್ರಚಾರಕರಾಗಿ ಭಾಗವಹಿಸಲಿದ್ದಾರೆ.

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ಮುಂತಾದ ಪ್ರಮುಖರು ರೋಡ್‌ಶೋದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.