ಜಿಲ್ಲೆ

ಕಾವೇರಿ ಪಬ್ಲಿಕ್ ಸ್ಕೂಲ್‌ನಲ್ಲಿ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಕೆ.ಎನ್.ರಾಘವೇಂದ್ರ

ಮಂಡ್ಯ: ನಗರದ ಹೊರವಲಯದಲ್ಲಿರುವ ಕಾವೇರಿ ಪಬ್ಲಿಕ್ ಶಾಲೆ ಹಾಗೂ ಕಾವೇರಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ 21ನೇ ವಾರ್ಷಿಕ ಸಮಾರಂಭವನ್ನು ಬಹಳ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಮುಖ್ಯಅತಿಥಿಯಾಗಿ ಆಗಮಿಸಿದ ಜೆ.ಎಸ್. ಪದವಿ ಕಾಲೇಜಿನ ಅಧ್ಯಕ್ಷ ಪ್ರೊ.ಎಸ್.ಜಯರಾಮ ಶೆಟ್ಟಿ, ಮಕ್ಕಳು ಮತ್ತು ಪಾಲಕರು, ಹಾಗೂ ಶಿಕ್ಷಕ ವರ್ಗದವರ ನಡುವೆ ಉತ್ತಮ ಬಾಂಧವ್ಯ ಹೇಗೆ ರೂಪಿತವಾಗಬೇಕೆಂಬುದನ್ನು ತಮ್ಮ 40 ವರ್ಷಗಳ ಸುದೀರ್ಘ ಅನುಭವವನ್ನು ಹಂಚಿಕೊಂಡರು. ಶಾಲೆಯ ಪ್ರಾಂಶುಪಾಲ ಪ್ರದೀಪ್‌ಕುಮಾರ್, ಕಾಲೇಜಿನ ಪ್ರಾಂಶುಪಾಲ ಇ.ಆನಂದ್ ಇತರರಿದ್ದರು.

ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ರಂಜಿಸಿದವು. ಶಾಲೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಶಿಕ್ಷಕ ಹಾಗೂ ಸಿಬ್ಬಂದಿ ಮತ್ತು ಕಳೆದ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳು, ರಾಷ್ಟ್ರಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.