ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ನಡೆಯಿತು.  
ಜಿಲ್ಲೆ

ರೋಜರಿ ಶಾಲೆಯಲ್ಲಿ ವಾರ್ಷಿಕೋತ್ಸವ

ಇಂದಿರಾ ಎನ್ ಕೆ

ಕುಂದಾಪುರ: ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಶುಕ್ರವಾರ ನಡೆಯಿತು. ಹೋಲಿ ರೋಜರಿ ಚಚ್ ಪ್ರಧಾನ ಧರ್ಮಗುರು ಪಾವ್ಲ್ ರೇಗೊ ಅಧ್ಯಕ್ಷತೆ ವಹಿಸಿದ್ದರು. ಲಕ್ಷ್ಮೀ ಸೋಮ ಬಂಗೇರ ಕಾಲೇಜು ಪ್ರಾಂಶುಪಾಲ ಡಾ.ರಾಜೇಂದ್ರ ನಾಯಕ್ ಮತ್ತು ಮಂಗಳೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜುಡಿತ್ ಮೆಂಡೊನ್ಸಾ ಮಾತನಾಡಿದರು. ಧರ್ಮಗುರು ಪಾವ್ಲ್ ರೇಗೊ, ಮುಖ್ಯ ಶಿಕ್ಷಕಿ ತೆರೆಜ್ ಶಾಂತಿ ಮತ್ತು ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸುಪ್ರಿಯಾ, ಅಂಜಲಿ ಉಪಸ್ಥಿತರಿದ್ದರು. ತೆರೆಜಾ ಶಾಂತಿ ವಂದಿಸಿದರು. ಜೂಲಿಯೆಟ್ ರೆಬೆಲ್ಲೊ ಕಾರ್ಯಕ್ರಮ ನಿರ್ವಹಿಸಿದರು.