ಜಿಲ್ಲೆ

ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯ, ಸ್ನೇಹ ಸಮ್ಮೇಳನ, ದೀಪದಾನ

Dharwada - Basavaraj Idli

ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾಷಿರ್ಕ ಸ್ನೇಹ ಸಮ್ಮೇಳನ ಹಾಗೂ ದೀಪದಾನ ಸಮಾರಂಭ ಸೆ. 21ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಡಾ. ಶಿವಾನಂದ ನಾಯಕ, ಶ್ಯಾಮ ಮಲ್ಲನಗೌಡರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕೆಎಲ್ಇ ಸಂಸ್ಥೆಯ ನಿರ್ದೇಶಕರು ಹಾಗೂ ಶಿಕ್ಷಣ ಮಹಾವಿದ್ಯಾಲಯ ಕಾರ್ಯಾಧ್ಯಕ್ಷ ಜಯಾನಂದ ಮುನವಳ್ಳಿ ಅಧ್ಯಕ್ಷತೆ ವಹಿಸುವರು.

ಸಂಜೆ 4.30ಕ್ಕೆ ನಡೆಯುವ ದೀಪದಾನ ಸಮಾರಂಭದಲ್ಲಿ ಹುಬ್ಬಳ್ಳಿ ತಾಪಂ ಪಿಎಂ ಪೋಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ಸಂಗಮೇಶ ಬಂಗಾರಿಮಠ ಪಾಲ್ಗೊಳ್ಳುವರು ಎಂದು ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.