ಇಂಡಿ: ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ 20 ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಮೇ 18 ಭಾನುವಾರ ಸಂಜೆ 4.30 ಕ್ಕೆ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ಕರೆಯಲಾಗಿದ್ದು, ಸಂಘದ ಸದಸ್ಯರು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಂಘದ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀಶಾಂತೇಶ್ವರ ವಿದ್ಯಾವರ್ಧಕ ಸಂಘದ ವಿಶೇಷ ಸಾಮಾನ್ಯ ಸಭೆ ಮೇ 12 ರಂದು ಸೋಮವಾರ ಬೆಳಗ್ಗೆ 11ಕ್ಕೆ ಸಿಂದಗಿ ರಸ್ತೆಯ ಶಾಂತೇಶ್ವರ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ. ಸಂಘದ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಜೀವ ಸದಸ್ಯ, ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.