ಜಿಲ್ಲೆ

ವಕೀಲರ ಸಂಘ ಬೆಳ್ತಂಗಡಿ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆ ಏರ್ಪಡಿಸಿದ್ದ ಸಂಘದ ಸದಸ್ಯರಾದ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು ಮತ್ತು ಗಣೇಶ್ ಗೌಡ ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಸಿಯಸ್ ಎಸ್.ಲೋಬೊ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ ಸ್ವಾಗತಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ.ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಪ್ರಶಾಂತ್ ಎಂ.ಲೆಕ್ಕಪತ್ರ ಮಂಡಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ವಂದಿಸಿದರು. ಉದಯ ಕುಮಾರ್ ಬಿ.ಕೆ.ನಿರೂಪಿಸಿದರು.