ಜಿಲ್ಲೆ

ವಾರ್ಷಿಕ ಸರ್ವ ಸಾಧಾರಣಾ ಸಭೆ, ಪ್ರತಿಭಾ ಪುರಸ್ಕಾರ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವಾರ್ಷಿಕ ಸರ್ವ ಸಾಧಾರಣಾ ಸಭೆ ಹಾಗೂ ಪ್ರಸಕ್ತ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅ. 12ರಂದು ಇಲ್ಲಿನ ಲಿಂಗಾಯತ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಮಹಾಸಭಾ ಜಿಲ್ಲಾದ್ಯಕ್ಷ ಪ್ರದೀಪ ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಘಟಕದ ವಾರ್ಷಿಕ ಸರ್ವಸಾಧಾರಣ ಸಭೆ ಜರುಗುವುದು. ನಂತರ ಮಧ್ಯಾಹ್ನ 1.30 ಗಂಟೆಗೆ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಅಽಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಉದ್ಘಾಟಿಸುವರು. ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅತಿಥಿಯಾಗಿ ಪಾಲ್ಗೊಳ್ಳುವರು. ನಾನು ಅಧ್ಯಕ್ಷತೆ ವಹಿಸುತ್ತೇನೆ ಎಂದರು.

ಮಹಾಸಭಾದಿ0ದ ಸಮಾಜದ ಮಕ್ಕಳಿಗೆ ಇಷ್ಟಲಿಂಗ ಧಾರಣೆ, ಸಹಜ ಶಿವಯೋಗ, ಧಾರ್ಮಿಕ ಆಚಾರ- ವಿಚಾರ ಹಾಗೂ ಬಸವಾದಿ ಶರಣರ ವಚನ ಅಧ್ಯಯನ, ಚಿಂತನ- ಮಂಥನ ಮತ್ತು ಎಲ್ಲ ದಾರ್ಶನಿಕರ, ಮಹಾತ್ಮರ ಸ್ಮರಣೋತ್ಸವ ನಡೆಸುವ ಮೂಲಕ ತಿಳುವಳಿಕೆ ನೀಡಲಾಗುತ್ತಿದೆ. ಯುವಕರಿಗೆ ವ್ಯಕ್ತಿತ್ವ ವಿಕಸನ, ಅನುಭಾವ, ಮಹಿಳಾ ಘಟಕದಿಂದ ವಿವಿಧ ಶರಣೆಯರ ಸ್ಮರಣೋತ್ಸವ, ವಚನನೃತ್ಯ, ವಚನ ಗಾಯನ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.