ಬಿಡದಿ: ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಕಗ್ಗಲಿಪುರ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಕಗ್ಗಲಿಪುರ ರಸ್ತೆಯ ಖಾಸಗಿ ಲೇಔಟ್ ನಲ್ಲಿ ಮರಕ್ಕೆ ನೇಣುಬಿಗಿದುಕೊಂಡಿರು ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.
ಮೃತ ತಿಮ್ಮೇಗೌಡ ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ತಿಮ್ಮೇಗೌಡ ಅವರು ಚನ್ನಪಟ್ಟಣ ತಾಲ್ಲೂಕಿನ ಕರಲಹಳ್ಳಿ ಗ್ರಾಮದವರಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.