ಶನಿವಾರಸಂತೆ: ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇತ್ತೀಚೆಗೆ ಡೆಂಘೆ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಆಲೂರು ಸಿದ್ದಾಪುರ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಸುಪರ್ಣಾ ಮಾತನಾಡಿ, ಡೆಂಘೆ ಜ್ವರದ ಲಕ್ಷಣಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು ಹಾಗೂ ಅತಿಸಾರ ಭೇದಿ ನಿಯಂತ್ರಣಾ ಕಾರ್ಯಕ್ರಮದ ಬಗ್ಗೆಯೂ ತಿಳಿಸಿದರು.
ಜಿಲ್ಲಾ ಎಪಿಡಮಾಲಜಿಸ್ಟ್ ಕಿಶೋರ್ ಮಾತನಾಡಿ, ಡೆಂಘೆ , ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದ ಅವರು, ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಬಗ್ಗೆ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ, ನಾಯಿ ಕಡಿತ ಹಾಗೂ ಹಾವು ಕಡಿತದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು ಮತ್ತು ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ, ಪರಿಸರ ಸ್ವಚ್ಛತೆ, ನೀರಿನ ಸ್ವಚ್ಛತೆಯ ಬಗ್ಗೆ ಹಾಗೂ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಎಪಿಡಮಾಲಾಜಿಸ್ಟ್ ಕಿಶೋರ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ, ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಸ್ವಾತಿ, ಇಂದ್ರಾ, ಶೋಭಾ, ಸಮುದಾಯ ಆರೋಗ್ಯ ಅಧಿಕಾರಿ ಗಣೇಶ್, ಪ್ರಯೋಗಶಾಲಾ ತಂತ್ರಜ್ಞಾ ಅಧಿಕಾರಿ ರುದ್ರೇಶ್, ಪವಿತ್ರಾ ಇತರರಿದ್ದರು.