ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಠಾಣೆ ಪಿಎಸ್‌ಐ ಬಸವರಾಜ ಕನಶೆಟ್ಟಿ ಮಾತನಾಡಿದರು 
ಜಿಲ್ಲೆ

ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ ಅರಿವು : ಗಂಗೊಳ್ಳಿ ಠಾಣೆ ಪಿಎಸ್‌ಐ ಬಸವರಾಜ ಕನಶೆಟ್ಟಿ ಸಲಹೆ

ಇಂದಿರಾ ಎನ್ ಕೆ

ಗಂಗೊಳ್ಳಿ: ಯುವಜನತೆಗೆ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗೆಗೆ ಸಮಗ್ರ ಅರಿವು ಇರಬೇಕು ಎಂದು ಗಂಗೊಳ್ಳಿ ಆರಕ್ಷಕ ಠಾಣೆ ಕ್ರೈಂ ಪಿಎಸ್‌ಐ ಬಸವರಾಜ ಕನಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗ, ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಶುಕ್ರವಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಸ್ವಾಗತಿಸಿದರು. ವಿದ್ಯಾರ್ಥಿನಿ ಟ್ರೆನಿಟಾ ರೆಬೆಲ್ಲೋ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗಣಾ ಆರ್.ಕೆ. ವಂದಿಸಿದರು.