ಶನಿವಾರಸಂತೆ: ಸಮಿಪದ ನಿಡ್ತ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನವನ್ನು ಆಚರಿಸಲಾಯಿತು.
ದಿನದ ಮಹತ್ವ ಕುರಿತು ಶನಿವಾರಸಂತೆ ಪೊಲೀಸ್ ಠಾಣೆ ಸಿಬ್ಬಂದಿ ಶಶಿಧರ್ ಮತ್ತು ಪ್ರಶಾಂತ್‌ಗೌಡ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವ್ಯಸನದಿಂದ ಆಗುವ ದುಷ್ಪರಿಣಾಮ ಮತ್ತು ಅಕ್ರಮ ಕಳ್ಳ ಸಾಗಣೆ ಕುರಿತು ವಿವರವಾಗಿ ಮಾಹಿತಿ ನೀಡುವ ಮೂಲಕ ಜಾಗೃತಿಗೊಳಿಸಿದರು. ನಂತರ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ ಪಾಲ್ಗೊಂಡಿದ್ದರು.