ಬೆಳ್ತಂಗಡಿ: ಉಜಿರೆಯ ಅನುಗ್ರಹ ಪಿಯು ಕಾಲೇಜಿನಲ್ಲಿ 2024-25ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನಡೆಯಿತು. ಅನುಗ್ರಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಅಬೇಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ವಿಜಯ್ ಲೋಬೊ ಶುಭ ಹಾರೈಸಿದರು. ಉಜಿರೆ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆ್ಯಂಟೋನಿ ಫನಾರ್ಂಡಿಸ್ ಉಪಸ್ಥಿತರಿದ್ದರು. ಸಂಸ್ಥೆಯ ನೂತನ ಸಂಚಾಲಕರಾಗಿ ಅಧಿಕಾರ ಸ್ವೀಕರಿಸಿದ ಅಬೇಲ್ ಲೋಬೊ ಅವರನ್ನು ಸ್ವಾಗತಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಹೆಝಲ್ ಹಾಗೂ ಅಲ್ಬೀನ್ ಅವರನ್ನು ಗೌರವಿಸಲಾಯಿತು. ಅರುಣ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.