ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮತು ಸಂಘ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.  
ಜಿಲ್ಲೆ

ಕೋಟ ಸಹಕಾರಿ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯವೈಖರಿ ಮತ್ತು ಸರ್ವಾಂಗೀಣ ಅಭಿವೃದ್ಧಿ ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು 2022-23ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವೆಂದು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರಿನಲ್ಲಿ ಜರುಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕೋಟ ಸಹಕಾರಿ ವ್ಯವಸಾಯಕ ಸಂಘ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮತು ಸಂಘ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಜಿ.ತಿಮ್ಮ ಪೂಜಾರಿ ಮತ್ತು ನಿರ್ದೇಶಕ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.