ಜಿಲ್ಲೆ

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2025- 26ನೇ ಸಾಲಿನ ಹೊಸ ಪ್ರದೇಶ ವಿಸ್ತರಣೆಯಡಿ ಕಲಘಟಗಿ ತಾಲೂಕಿನ ರೈತರಿಗೆ ವಿವಿಧ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ  ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರು ಮಾವು, ಬಾಳೆ, ಪಪ್ಪಾಯ, ಶುಂಠಿ ಹಾಗೂ ಡ್ಯ್ರಾಗನ್ ಫ್ರೂಟ್, ಹೂ ಬೆಳೆ ಪ್ರದೇಶ ವಿಸ್ತರಣೆ, ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಮಾವು ಪುನಃಶ್ವೇತನ, ಹಸಿರುಮನೆ ನಿರ್ಮಾಣ, ನೀರು ಸಂಗ್ರಹಣ ಘಟಕ, ಪ್ಲಾಸ್ಟಿಕ್ ಮಲ್ಚಿಂಗ್ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಜೂ. 6ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕಲಘಟಗಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.